Monday, October 8, 2012

ಎರಡು ಕವನ ಪ್ರೇಮ ದೇವತೆ ಮತ್ತು ಸಾವು !

ಸಂಪದ ಸಾಲಿನಲ್ಲಿ ಪ್ರಕಟವಾದ ನನ್ನ 2 ಕವನ , clear ಆಗಿ ಓದಲು ಕೆಳಗೆ ಮತ್ತೆ type ಮಾಡಿದ್ದೀನಿ ಓದಿ 




ಪ್ರೇಮ ದೇವತೆ !
 ====================

ಪ್ರೀತಿಯ ಗಂಧಗಾಳಿ
ಅ ಆ ಇ ಈ ಒತ್ತು ಇಳಿ
ಏನೂ ಗೊತ್ತಿಲ್ಲದವ ನಾನು ಶತಮೂರ್ಖ
ಅಕ್ಷರ ಕಾಗುಣಿತ
ಅಂಖೆ ಸಂಖ್ಯೆಗಳ ಮಿಳಿತ
ಅಳೆದು ಅರೆದು ಕುಡಿಸಿದೆ ನೀನು ಮಗ್ಗೀ ಪುಸ್ತಕ !

ಪ್ರೀತಿ ಬೆಂಗಾಡಿನಲಿ
ಆಳವರಿಯದ ಸಾಗರದಲಿ
ದಾರಿ ಕಾಣದೇ, ಬಿಟ್ಟಿದ್ದೆ ತೀರ ಸೇರುವ ಆಸೆ
ಅಡೆತಡೆಯ ಪುಡಿಮಾಡಿ
ಅಡಿಗಡಿಗೆ ದಾರಿ ತೋರಿ
ದಡ ಸೇರಿಸಿದ ನೀನು ಪ್ರೇಮ ನಕಾಶೆ !

ಇಂದಿಲ್ಲಿ ಮತ್ತಲ್ಲಿ
ನಾಳೆ ಇನ್ನೆಲ್ಲಿ, ಕಂಡ ಕಂಡಲ್ಲಿ
ಪ್ರೀತಿ ಹುಡುಕುತ್ತಾ ಹೊರಟವ ನಾನು ಅಲೆಮಾರಿ
ನಿಂತಲ್ಲಿ ಕುಂತಲ್ಲಿ
ಕಂತೆ ಕಂತೆ ಒಲವ ಚೆಲ್ಲಿ
ಅರಮನೆಯ ಕಟ್ಟಿಸಿದೆ ನೀನು ಪ್ರೇಮದೇವತೆಯೇ ಸರಿ !

ದಾರಿ ಮರೆಯದ
ಮತ್ತೆ ತಿರುಗದ
ಮಂತ್ರ ತಪ್ಪದ ನಾನು ಈಗ ಪ್ರೇಮ ಪೂಜಾರಿ !

ಸಾವು !
====================

ಹುಟ್ಟಿನ ಬೆನ್ನಿಗೇ ಹುಟ್ಟಿದ್ದು
ಸಾವು ಅವಳಿ ಜವಳಿ
ಜೊತೆ ಜೊತೆಗೇ ಸಾಗುವ
ಹುಟ್ಟು ಸಾವು ಸಯಾಮಿ

ಅದೃಶ್ಯ ಅಗೋಚರ
ಪ್ರತ್ಯಕ್ಷ,ಕಾಡಿದರೆ ಗ್ರಹಚಾರ 
ನೀತಿ ನಿಯತ್ತು
ಸತ್ಯವಾಗಿರಲಿ ಸ್ವತ್ತು
ಹುಟ್ಟು ನಿನ್ನ ಪರ ಸಾವು ಅಪರ !

ಬಲ್ಲಿದ ಬಡವ
ಇಲ್ಲ ಭೇದ ಭಾವ
ಉಪ್ಪರಿಗೆ ಕೊಪ್ಪರಿಗೆ
ಎಲ್ಲಾ ಒಂದೇ ಸಾವಿಗೆ !
ಮರೆಯವನೂ ಮಡಿದ
ಮೆರೆದವನೂ ಮರೆಯಾದ !

ಯಾರನ್ನೂ ಬಿಟ್ಟಿಲ್ಲ
ಯಾರನ್ನೂ ಇಟ್ಟಿಲ್ಲ !


ಸಾವು ಖಚಿತ ಒಮ್ಮೊಮ್ಮೆ ಉಚಿತ !
ಎಲ್ಲಾ ಪೂರ್ವ ನಿಶ್ಚಿತ
ಸಾಧನೆಯತ್ತ ಇರಲಿ ಚಿತ್ತ
ಬದುಕಾಗಿರಲಿ ನ್ಯಾಯ ಸಮ್ಮತ

ಸಾವು !
ಕತ್ತಲೆಯಲ್ಲೂ ಬೆಂಬಿಡದ ನೆರಳು
ಎಚ್ಚರ !
ಎಡವಿದರೆ ಉರುಳು





3 comments:

ಸಂಧ್ಯಾ ಶ್ರೀಧರ್ ಭಟ್ said...

ಸೂಪರ್ ಸಾಲುಗಳು ಪ್ರವೀ ...

ಮೊದಲ ಕವನದ
ಇಂದಿಲ್ಲಿ ಮತ್ತಲ್ಲಿ
ನಾಳೆ ಇನ್ನೆಲ್ಲಿ, ಕಂಡ ಕಂಡಲ್ಲಿ
ಪ್ರೀತಿ ಹುಡುಕುತ್ತಾ ಹೊರಟವ ನಾನು ಅಲೆಮಾರಿ
ನಿಂತಲ್ಲಿ ಕುಂತಲ್ಲಿ
ಕಂತೆ ಕಂತೆ ಒಲವ ಚೆಲ್ಲಿ
ಅರಮನೆಯ ಕಟ್ಟಿಸಿದೆ ನೀನು ಪ್ರೇಮದೇವತೆಯೇ ಸರಿ !
ಈ ಸಾಲುಗಳು ತುಂಬಾ ಇಷ್ಟವಾದವು...

ಎರಡನೇ ಕವನದ ಬಗೆಗೆ ಏನು ಹೇಳಲಿ..
ಎಲ್ಲಾ ಸಾಲುಗಳು ಚಂದ ಚಂದ ...
ತುಂಬಾ ಇಷ್ಟವಾದ ಕವನ...

sunaath said...

ಪ್ರೇಮಪೂಜಾರಿಗೆ ಅಭಿನಂದನೆಗಳು,-ಸುಂದರವಾದ ಕವನಗಳಿಗಾಗಿ!

akshaya kanthabailu said...

ಚಂದ ಬರೆದಿದ್ದಿರ. ಬರವಣಿಗೆ ಸಾಗಲಿ